ತುಮಕೂರು: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಬೇಕರಿಗೆ ನುಗ್ಗಿದ್ದು, ಎಲೆ ಹಾಗೂ ಬಳೆ ಮಾರುತಿದ್ದ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ ಹಾಗೂ ಬೈಲಪ್ಪ ಸೇರಿ ಮೂವರು ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಸಿದ್ದಗಂಗಮ್ಮ, ಕಾಂತರಾಜು, ಜಯಣ್ಣ ಸೇರಿ ನಾಲ್ವರು ಗಾಯಗೊಂಡಿದ್ದಾರೆ.
ಇನ್ನು ಘಟನೆ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಯೋಗೆಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಘಟನೆ ಬಗ್ಗೆ ಟ್ವೀಟ್ ಮೂಲಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದುಖ:ತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.


