Thursday, May 1, 2025
28.8 C
Bengaluru
LIVE
ಮನೆರಾಜಕೀಯಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುತ್ತೇವೆ - ಯತ್ನಾಳ್

ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುತ್ತೇವೆ – ಯತ್ನಾಳ್

ಗದಗ: ಕೇಂದ್ರದಲ್ಲಿ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತವಾಗಿರುವ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದನ್ನು ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುತ್ತೇವೆ ಎಂದು ಶುಕ್ರವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನಗರದ ವಿವೇಕಾನಂದ ಸಭಾಭವನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಧರ್ಮಾಧಾರಿತ ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ  ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರ ಮುಸ್ಲಿಂ (ಸಾಬರ) ಸರಕಾರವಾಗಿದೆ..ನೇಹಾ ಹಿರೇಮಠ, ಯಾದಗಿರಿಯ ದಲಿತ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ.ಈ ಎರಡು ನೋಡಿದರೆ ಕಾಂಗ್ರೆಸ್ ಮುಸ್ಲಿಂ ಗುಂಡಾಗಳನ್ನು ಪೋಷಿಸುತ್ತಿದೆ ಅಂತ ಕಿಡಿಕಾರಿದರು..

ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದಿದ್ದಾರೆ. ಆದರೂ ಕಾಂಗ್ರೆಸ್ಸಿಗರು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ವದಂತಿ ಹರಿಬಿಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರು ನಿಧನರಾದಾಗ ಅವರ ಅಂತ್ಯಕ್ರಿಯೆಗೆ ಜಾಗ ನೀಡದವರು ಇವತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ ಅಂತ ಆಕ್ರೋಶ ಹೊರಹಾಕಿದರು.

 

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments