ರಾಜ್ಯಸುದ್ದಿ

ಬಂಟ್ವಾಳದ ಬಿಸಿ ರೋಡ್​​​ ಸರ್ಕಲ್​​​ ನಲ್ಲಿ ಅಪಘಾತ: ಮೂವರು ಸಾವು, ಹಲವರಿಗೆ ಗಾಯ

ಬಂಟ್ವಾಳ: ಬಿಸಿರೋಡಿನ ಸರ್ಕಲ್​​​​ ನಲ್ಲಿ ಭೀಕರ ಕಾರು ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿದ್ದಾರೆ.. ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. (64) ರಮ್ಯ (23) ಹಾಗೂ ನಂಜಮ್ಮ ( 75) ಬೆಂಗಳೂರಿನ ಪೀಣ್ಯ ನಿವಾಸಿಗಳೆಂದು ತಿಳಿದು ಬಂದಿದೆ.

ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಸೇರಿ ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎಂದು ಹೇಳಲಾಗಿದೆ. 9 ಮಂದಿಯಲ್ಲಿ ರಮ್ಯಾ ಅವರು ಪೋಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂದು ಹೇಳಲಾಗಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ಮುಂಜಾನೆ ಸುಮಾರು 4.40 ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡಿನ ಎನ್.ಜಿ.ಸರ್ಕಲ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇನ್ನು ಅವೈಜ್ಞಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದು, ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button