ರಾಜ್ಯ

ಕೇರಳದ ತ್ರಿಶೂರ್​​​ನಲ್ಲಿ ಭೀಕರ ಅಪಘಾತ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Horrific accident in Thrissur, Kerala – eight engineering students dead!

ತ್ರಿಶೂರ್‌ : ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತಮಿಳುನಾಡಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಕೈಪಮಂಗಲಂ ಸಮೀಪದ ಪಣಂಬಿಕ್ಕುನ್ನು ಎಂಬಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಅತಿವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ತಮಿಳುನಾಡಿನಿಂದ ಕೇರಳ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡವು ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ದರ್ಶನ ಮುಗಿಸಿ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು 11.40 ರ ವೇಳೆಗೆ ಪಣಂಬಿಕ್ಕುನ್ನು ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಇವರ ಕಾರು ಅತಿವೇಗದಲ್ಲಿ ಡಿಕ್ಕಿ ಹೊಡೆದಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿದೆ.

Comments (0)

Your email address will not be published. Required fields are marked *

Back to top button