
ಕೋಲಾರ : ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ(70), ದೀಕ್ಷಿತ (25), ದೇವೆಂದ್ರ ಕುಮಾರ್, (41) ಜಿಷ್ಣು (13) ಮೃತರು.
ಕುಟುಂಬಸ್ಥರು ಸೇರಿಕೊಂಡು ತಿರುಪತಿಗೆ ತೆರಳಿದ್ದರು. ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಕೋಲಾರದ KGF ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ. ಈ ವೇಳೆ ಟೊಯೋಟಾ ರಿಯಾನ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಮತ್ತಷ್ಟು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




