Freedom TV

ಅಪಘಾತಕ್ಕಿಡಾದ ರೈತ ಮುಖಂಡ; ಪಂಜಾಬ್ ನಿಂದ – ಬೆಂಗಳೂರಿಗೆ ಏರ್ ಲಿಫ್ಟ್..

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪಂಜಾಬ್ನ ಪಟಿಯಾಲ ಬಳಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಲಿಫ್ಟ್ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ವ್ಯವಸ್ಥೆ ನಿರ್ಧರಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಸೇರಿ ತಮಿಳುನಾಡಿನ ಪಾಂಡಿಯನ್ ತೀವ್ರ ಗಾಯಗೊಂಡಿದ್ದರು.   ಈ ಹಿನ್ನಲೇ ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಶಾಂತಕುಮಾರ್ ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button