ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು ಸಂಚಾರಿ ಪೀಠ ಜಾಮೀನು ಮಂಜೂರು ಮಾಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎನ್.ಎ ನಾಗೇಶ್ ಜಾಮೀನು ನೀಡಿದ್ದಾರೆ. ಇನ್ಮುಂದೆ ಈ ತರಹದ ನ್ಯೂಸೆನ್ಸ್ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ವಾಡ ಮಂಡಿಸಿದದ್ದು, ಬಂಧನ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ, ಪ್ರಥಮ ನೋಟಿಸ್ ನೀಡಿದ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮುಗಲಭೆ ಆಗಿಲ್ಲ. ತಿಮರೋಡಿ ಕೂಡ ಒಬ್ಬ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೋಷಿಸಿಲ್ಲ ಎಂದು ತಿಳಿಸಿದರು.