ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಬಂಧಿತರನ್ನು ಖಾಸಗೀ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ, ಸಲ್ಮಾನ್ ಮತ್ತು ರವಿ ಎಂದು ಗುರುತಿಸಲಾಗಿದೆ.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನ ಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಬಂದು ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಸ್ಥಳೀಯರಿಂದ ಬಟ್ಟೆ ಪಡೆದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ. ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಬಳಿಕ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.