Tuesday, November 18, 2025
24.7 C
Bengaluru
Google search engine
LIVE
ಮನೆರಾಜಕೀಯತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ- ಸಿದ್ದರಾಮಯ್ಯ

ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ- ಸಿದ್ದರಾಮಯ್ಯ

ಬಾಗಲಕೋಟೆ: ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದರು.

ಇಂದು ರಾತ್ರಿ ನಡೆಯಲಿರುವ ಡಿನ್ನರ್ ಪಾರ್ಟಿಗೂ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ನೀಡುತ್ತಿರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ಮಾಧ್ಯಮದವರಿಗೆ ಮತ್ತು ಬಿಜೆಪಿಯವರಿಗೆ ಮಾತ್ರ ವಿಶೇಷ ಎಂದು ತಿಳಿಸಿದರು.

ದೇವೇಗೌಡರ ಆರೋಗ್ಯ ಚೆನ್ನಾಗಿದೆ, ಚೇತರಿಕೆ ಆಗುತ್ತಿದೆ. ವೈದ್ಯ ಸತ್ಯನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಎರಡ್ಮೂರು ದಿನಗಳಲ್ಲಿ ಚೇತರಿಕೆ ಆಗುತ್ತಾರೆ ಎಂದಿದ್ದಾರೆ ಎಂದು ನುಡಿದರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments