ನಟ ಅಲ್ಲು ಅರ್ಜುನ್ ಅವರಿಗೆ ಸಂಕಷ್ಟ ಸದ್ಯಕ್ಕೆ ಪೂರ್ಣಗೊಳ್ಳುವ ಹಾಗೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ತೊಂದರೆ ಎದುರಾಗಿದೆ ಎಂಬ ವಿಚಾರ ತಿಳಿದು ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ ಕೇಳಿ.
ಬನ್ವರ್ ಸಿಂಗ್ ಶೇಖಾವತ್ (ಫಹಾದ್ ಫಾಸಿಲ್) ಸ್ವಿಮ್ಮಿಂಗ್ಪೂಲ್ನಲ್ಲಿ ಇರುವಾಗ ಪುಷ್ಪರಾಜ್ (ಅಲ್ಲು ಅರ್ಜುನ್ ) ಮೂತ್ರ ಮಾಡುತ್ತಾನೆ. ಇದು ಪೊಲೀಸರಿಗೆ ಅವಮಾನ ಮಾಡುವಂಥದ್ದು ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಕಾಪಾಡುವರಿಗೆ ನೀಡುವ ಗೌರವ ಇದಲ್ಲ ಎಂದಿದ್ದಾರೆ. ಹೀಗಾಗಿ, ಅವರು ದೂರು ದಾಖಲು ಮಾಡಿದ್ದು, ಅಲ್ಲು ಅರ್ಜುನ್ಗೆ ನೋಟಿಸ್ ಹೋಗಿದೆ ಎನ್ನಲಾಗಿದೆ.
ಈಗ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮುಂದೇನು ಎನ್ನುವ ಭಯ ಅವರನ್ನು ಕಾಡುತ್ತಿದೆ. ಇತ್ತೀಚೆಗೆ ಅವರು ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.