Sunday, March 1, 2026
20 C
Bengaluru
Google search engine
LIVE
ಮನೆ#Exclusive NewsTop Newsನಟ ದರ್ಶನ್ ಕೇಸ್; ಎಸಿಪಿ ಚಂದನ್, ಇನ್ಸ್‌ಪೆಕ್ಟರ್ ಗಿರೀಶ್ ಅಮಾನತಿಗೆ ಆಗ್ರಹ

ನಟ ದರ್ಶನ್ ಕೇಸ್; ಎಸಿಪಿ ಚಂದನ್, ಇನ್ಸ್‌ಪೆಕ್ಟರ್ ಗಿರೀಶ್ ಅಮಾನತಿಗೆ ಆಗ್ರಹ

ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆದಿದೆ.

ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರು ದರ್ಶನ್ ವಿರುದ್ಧ ಸುಳ್ಳು ಸಾಕ್ಷ್ಯಗಳನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟವು, ಈ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದೆ. ಈ ಕುರಿತು ಸಂಘಟನೆಯ ಪ್ರಮುಖರಾದ ನಟರಾಜ್ ಬೊಮ್ಮಸಂದ್ರ ಅವರು ಮಾಹಿತಿ ನೀಡಿದ್ದು, ತನಿಖೆಯಲ್ಲಿ ಪಾರದರ್ಶಕತೆ ಕಾಪಾಡಬೇಕೆಂದು ಆಗ್ರಹಿಸಿದ್ದಾರೆ.

ಈ ಹೋರಾಟದ ಭಾಗವಾಗಿ ಮಾರ್ಚ್ 11ರ ಬುಧವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಿಗ್ಗೆ 11:30ಕ್ಕೆ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ನಟ ದರ್ಶನ್ ಪರವಾಗಿರುವ ವಿವಿಧ ಕನ್ನಡ ಪರ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿವೆ. ಕಾನೂನು ವ್ಯವಸ್ಥೆಯಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಮತ್ತು ಪ್ರಭಾವಕ್ಕೊಳಗಾಗಿ ಯಾವುದೇ ನಕಲಿ ದಾಖಲೆಗಳನ್ನು ಸೃಷ್ಟಿಸಬಾರದು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments