ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ 49 ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲೇ ಇದ್ದರು. ಈಗ ಅವರಿಗೆ ಜಾಮೀನು ಸಿಕ್ಕಿದ್ದು, ಅವರು ಶಸ್ತ್ರಚಿಕಿತ್ಸೆ ಮಾಡಿಸದೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇಂದು ಆಸ್ಪತ್ರೆಯಿಂದ ಹೊರ ಬಂದು ನಟ ಧನ್ವೀರ್ ಕಾರ್ ಹತ್ತಿ ಪತ್ನಿ ಮತ್ತು ಮಗನೊಂದಿದೆ ಹೊರಟರು. ಹೊಸ ಕೆರೆಹಳ್ಳಿಯಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಗೆ ತೆರಳಿದ್ದಾರೆ.