Tuesday, January 27, 2026
26.7 C
Bengaluru
Google search engine
LIVE
ಮನೆ#Exclusive NewsTop Newsಜೈಲಿಲ್ಲೇ ದರ್ಶನ್​ಗೆ ಫಿಜಿಯೋಥೆರಪಿ: ವ್ಯಾಯಾಮ ಮಾಡಲು ವೈದ್ಯರಿಂದ ಸಲಹೆ

ಜೈಲಿಲ್ಲೇ ದರ್ಶನ್​ಗೆ ಫಿಜಿಯೋಥೆರಪಿ: ವ್ಯಾಯಾಮ ಮಾಡಲು ವೈದ್ಯರಿಂದ ಸಲಹೆ

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್​ಗೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನೋವಿನ ತಾತ್ಕಾಲಿಕ ಶಮನಕ್ಕಾಗಿ ಬಿಮ್ಸ್​ನ ಫಿಜಿಯೋಥೆರಪಿ ತರಬೇತುದಾರರು, ಶುಕ್ರಮಾರ ಸಂಜೆ ಜೈಲಿಗೆ ಆಗಮಿಸಿ ಕೆಲ ವ್ಯಾಯಾಮ ಮಾಡಲು ತಿಳಿಸಿದ್ಧಾರೆ.

ಹೌದು.. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್​ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜೈಲಿನಲ್ಲಿ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಸರ್ಜಿಕಲ್ ಬೆಡ್ ವ್ಯವಸ್ಥೆ ಮಾಡಿದ್ದರೂ ಬೆನ್ನು ನೋವು ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ನಿನ್ನೆ ವಕೀಲ ರಾಮ್​ ಸಿಂಗ್, ದರ್ಶನ್ ಭೇಟಿಗಾಗಿ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಸಂದರ್ಶಕರ ಕೊಠಡಿಗೆ ಬರುವಾಗ ಬೆನ್ನನ್ನು ಪದೇ ಪದೇ ಮುಟ್ಟಿಕೊಳ್ಳುತ್ತಾ ನೋವಿನಲ್ಲಿಯೇ ಸಂದರ್ಶಕರ ಕೊಠಡಿಗೆ ದರ್ಶನ್ ತೆರಳಿದ ವಿಡಿಯೋ ವೈರಲ್ ಆಗುತ್ತಿದೆ.

ಹೆಚ್ಚು ಸಮಯ ನಿಲ್ಲಲು ಸಹ ಆಗದೆ ಗೋಡೆಯ ಆಸರೆ ಪಡೆದು ಹೈಸೆಕ್ಯುರಿಟಿ ಸೆಲ್ ಮುಂದೆ ದರ್ಶನ್ ನಿಂತಿದ್ದರು. ದರ್ಶನ್​ಗೆ ಜೈಲಿನಲ್ಲಿ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ದರ್ಶನ್ ಗೆ ಬೆನ್ನು ನೋವು ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗಿದೆ. ದರ್ಶನ್​ರ ಬೆನ್ನಿನ ಎಲ್​1 ಹಾಗೂ ಎಲ್​5 ಭಾಗದಲ್ಲಿ ತೀವ್ರವಾಗಿ ನೋವಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿಗೆ ರವಾನಿಸಿ ಎಂದ ದರ್ಶನ್

ಇನ್ನು ಬೆನ್ನು ನೋವಿಗೆ ಶೀಘ್ರ ಚಿಕಿತ್ಸೆಯ ಅಗತ್ಯ ಇದ್ದು, ದರ್ಶನ್, ತಮ್ಮನ್ನು ಬೆಂಗಳೂರಿಗೆ ಕಳಿಸುವಂತೆ, ಅಲ್ಲಿ ತಮ್ಮ ವೈದ್ಯರ ಬಳಿ ತಾನು ಚಿಕಿತ್ಸೆ ಪಡೆದುಕೊಳ್ಳುವುದಾಗಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments