ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಜುಲೈ 4ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ನಾಲ್ವರು ಆರೋಪಿಗಳನ್ನೂ ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದ್ದಾರೆ.
ಇನ್ನೂ ಜೈಲಿನಲ್ಲಿ 6106 ಕೈದಿ ಸಂಖ್ಯೆ ಪಡೆದಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ.
ಜೈಲು ದಿನಚರಿ ಹೇಗಿತ್ತು?
13 ವರ್ಷಗಳ ನಂತರ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ ಸೆಂಟ್ರಲ್ ಜೈಲ್‌ನಲ್ಲಿ ಮುದ್ದೆ ಮುರಿದಿದ್ದಾರೆ. ರಾತ್ರಿ ದರ್ಶನ್‌ಗೆ ಮುದ್ದೆ, ಚಪಾತಿ, ಸಾಂಬಾರ್ ಮತ್ತು ಮಜ್ಜಿಗೆ ನೀಡಲಾಗಿತ್ತು. ಆದ್ರೆ ಸರಿಯಾಗಿ ಊಟ ಮಾಡದ ದರ್ಶನ್ ತಡವಾಗಿಯೇ ನಿದ್ರೆಗೆ ಜಾರಿದ್ದಾರೆ. ಕಸ್ಟಡಿಯಲ್ಲಿ ಪೊಲೀಸ್ ವಿಚಾರಣೆಯಿಂದ ಹೈರಾಣಾಗಿದ್ದ ನಟ, ಮೊದಲ ದಿನ ಜೈಲೂಟ ಸರಿಯಾಗಿ ಮಾಡಲಾಗದೇ ತಡರಾತ್ರಿ ವರೆಗೂ ಮಂಕಾಗಿಯೇ ಕುಳಿತಿದ್ದರು. ರಾತ್ರಿ 11:30ರ ನಂತರ ನಿದ್ರೆಗೆ ಜಾರಿದ್ದಾರೆ ಎಂಬುದಾಗಿ ಎಂದು ಜೈಲರ್‌ವೊಬ್ಬರು ತಿಳಿಸಿದ್ದಾರೆ.
ಬೆಳಗ್ಗೆ 6:30ರ ವೇಳೆಗೆ ಎಚ್ಚರಗೊಂಡ ದರ್ಶನ್, ನಿತ್ಯಕರ್ಮ ಮುಗಿಸಿ, ಸೆಲ್‌ನಲ್ಲಿ ಕುಳಿತಿದ್ದಾರೆ, ದರ್ಶನ್ ಇರುವ ಅದೇ ಸೆಲ್‌ನಲ್ಲಿ ಸಹಖೈದಿ ವಿನಯ್ ಸೆರೆವಾಸ ಅನುಭವಿಸುತ್ತಿದ್ದಾರೆ. ಇಂದು (ಭಾನುವಾರ) ಜೈಲಿನ ಮೆನುವಿನ ಪ್ರಕಾರ ದರ್ಶನ್‌ಗೆ ಪಲಾವ್ ನೀಡಲಿದ್ದಾರೆ ಎಂದು ಜೈಲರ್ ಮಾಹಿತಿ ನೀಡಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com