ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.
ಕಾನೂನಿನ ಸಮಸ್ಯೆಯಿಂದಾಗಿ ಯಾವುದೇ ವಿಚಾರವನ್ನು ಬಹಿರಂಗಗೊಳಿಸದಂತೆ ಕುಟುಂಬದವರು ಆಸ್ಪತ್ರೆಯವರಿಗೆ ಹೇಳಿರುವುದಾಗಿ ತಿಳಿದುಬಂದಿದೆ.