ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು .
ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನು ಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ನ್ಯಾಯ ಮೂರ್ತಿಗಳಾದ ಜೆ.ಬಿ.ಪರಿದಿವಾಲಾ ಹಾಗೂ ಆರ್.ಮಹದೇವನ್ ದ್ವಿಸದಸ್ಯ ಪೀಠದ ಮುಂದೆ ಬರಲಿದೆ. ಡೆಸೆಂಬರ್‌ನಲ್ಲಿ ಆರೋಪಿಗಳು ಜಾಮೀನು ಪಡೆದಿದ್ದು, ಇದನ್ನು ಪ್ರಶ್ನಿಸಿ ಜ.6ರಂದು ರಾಜ್ಯ ಪೊಲೀಸರು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.


