ಜಿಲ್ಲೆಮನರಂಜನೆಸಿನಿಮಾ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ

ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನೆರವೇರಿದ್ದು, ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ.

ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಈ ಹಿಂದೆ ಮಗಳು ಜನಿಸಿದಾಗಲೇ ನಾಮಕರಣ ಯಾವಾಗ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಲೇ ಇದ್ದರು. ಈ ವೇಳೆ ಧ್ರುವ ಸರ್ಜಾ ಅವರು ಒಂದು ಸಮಯ ನೋಡಿ ನಾಮಕರಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಅಂತಿಮವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನದಂತೆ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

 

Comments (0)

Your email address will not be published. Required fields are marked *

Back to top button