Freedom TV
ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ಇನ್ನಿಲ್ಲ: ಹೈದರಾಬಾದ್‌ನಲ್ಲಿ ವಿಧಿವಶ.

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದಾಗಿ ಹೈದರಾಬಾದ್‌ನಲ್ಲಿ ನಿನ್ನೆ ನಿಧನರಾಗಿದ್ದಾರೆ. 85 ವರ್ಷ ವಯಸ್ಸಿನವರಾಗಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮೃತರ ಅಂತಿಮ ಸಂಸ್ಕಾರವನ್ನು ಕ್ರೈಸ್ತ ಧರ್ಮದ ಸಂಪ್ರದಾಯದಂತೆ ನೆರವೇರಿಸಲಾಗಿದ್ದು, ಇಂದು ಬೆಂಗಳೂರಿನ ಶಾಂತಿನಗರದ ಚರ್ಚ್‌ನಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿ ವಿಶೇಷ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ನಟ ಪ್ರಕಾಶ್ ರಾಜ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಆಪ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ದುಃಖದ ಸಮಯದಲ್ಲಿ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಪ್ರಕಾಶ್ ರಾಜ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.




