ಮೈಸೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.. ಕಾಂತಾರ ಚಾಪ್ಟರ್-1 ಸಿನಿಮಾ ಸಕ್ಸಸ್ ಸಂಭ್ರಮದಲ್ಲಿದ್ದು, ಟೆಂಪಲ್ ರನ್ ಮಾಡುತ್ತಿದ್ದಾರೆ.. ಇತ್ತೀಚೆಗೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ಅವರು ಈಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟ ಚಾಮುಂಡೇಶ್ವರಿಯ ದರ್ಶನ್ ಪಡೆದಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ ರೀತಿ ಈ ಬಾರಿಯೂ ಇನ್ನೊಂದು ಚಾಪ್ಟರ್ ಜನರಿಗೆ ತಲುಪಿರುವ ರೀತಿ ಹಾಗೂ ಅವರು ಒಪ್ಪಿಕೊಂಡಿರುವ ರೀತಿ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು. ಇನ್ನು ರಿಷಬ್ ಶೆಟ್ಟಿ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು ಡಿವೈನ್ ಸ್ಟಾರ್ನನ್ನು ನೋಡಿ ಎಕ್ಸೈಟ್ ಆಗಿದ್ದಾರೆ.


