Top Newsರಾಜ್ಯಸಿನಿಮಾಸುದ್ದಿ

ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್‌

ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್‌ನಲ್ಲಿರುವ ನಟ ಶಿವರಾಜ್‌ಕುಮಾರ್‌ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್‌ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್‌ ಆಗುವುದಾಗಿ ಶಿವಣ್ಣ ತಿಳಿಸಿದ್ದಾರೆ.

ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಫ್ಯಾನ್ಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗೆ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ಕೃತಜ್ಞತೆ ಸಲ್ಲಿಸಿದ್ದಾರೆ.

ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ಶಿವರಾಜ್‌ಕುಮಾರ್.‌ ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮೆಲ್ಲರನ್ನೂ ನೋಡುವುದಕ್ಕೆ ನಾನು ಜ.26 ರಂದು ಗಣರಾಜ್ಯೋತ್ಸವದಂದು ಬೆಂಗಳೂರಿಗೆ ಬರುತ್ತಿದ್ದೇನೆ’ ಎಂದು ಅಭಿಮಾನಿಗಳಿಗೆ ನಟ ಶಿವರಾಜ್‌ಕುಮಾರ್‌ ತಿಳಿಸಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವರಾಜ್‌ಕುಮಾರ್‌ ಅವರು ಇತ್ತೀಚಿಗೆ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಯುಎಸ್‌ನ ಮಿಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಕೆಲವು ದಿನಗಳ ಕಾಲ ಅಲ್ಲೇ ಉಳಿದು ವಿಶ್ರಾಂತಿ ಪಡೆದರು. ಈ ವೇಳೆ ಸ್ನೇಹಿತರು, ಆಪ್ತರು, ಅಭಿಮಾನಿಗಳ ಜೊತೆ ಒಡನಾಡಿ ಎಂಜಾಯ್‌ ಮಾಡಿದರು. ಅಮೆರಿಕದಲ್ಲಿ ಶಿವಣ್ಣನ ಜೊತೆ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಕೂಡ ಇದ್ದಾರೆ. ಈಗ ನಟ ಸಂಪೂರ್ಣ ಚೇತರಿಸಿಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ.

Comments (0)

Your email address will not be published. Required fields are marked *

Back to top button