#Exclusive NewsTop Newsಮನರಂಜನೆಸಿನಿಮಾಸುದ್ದಿ

ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್ ; ಕ್ಯಾನ್ಸರ್ ಸರ್ಜರಿ ಸಕ್ಸ್​ಸ್​..!

ನಟ ಶಿವರಾಜ್ ಕುಮಾರ್ ಗೆ ಕ್ಯಾನ್ಸರ್ ಸರ್ಜರಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅದರ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ  ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ .

ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಲ್ಲಿ ಕ್ಯಾನ್ಸರ್‌ ಚಿಕಿತ್ಸೆಗೆ ಪಡೆದಿದ್ದಾರೆ. ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್‌ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಅಗಮಿಸುತ್ತಾರೆ ಎಂದು ಹೇಳಲಾಗುತ್ತಿದೆ.ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್‌ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್‌ ಚೆಕಪ್‌ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

 

Comments (0)

Your email address will not be published. Required fields are marked *

Back to top button