ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರೆ.
ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್ಗೆ ನೀಡಿತ್ತು. ಇದೀಗ ಕೆವಿಎನ್ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ. 20 ಎಕರೆ ಜಾಗದಲ್ಲಿ ಕೋಟಿ ವೆಚ್ಚ ಮಾಡಿ ಸೆಟ್ ನಿರ್ಮಾಣ ಮಾಡಲಾಗಿದ್ದು, ಒಂದೊಮ್ಮೆ ಸೆಟ್ ತೆರವು ಮಾಡಬೇಕು ಎಂದರೆ ಟಾಕ್ಸಿಕ್ ಚಿತ್ರತಂಡಕ್ಕೆ ಭಾರಿ ನಷ್ಟವಾಗಲಿದೆ. ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com