Top Newsಸಿನಿಮಾಸುದ್ದಿ

ಅಂಕಿತಾ ಅಮರ್‌ ನಟನೆಯ ‘ಹೇಳು ಗೆಳತಿ’ ಎಂದು ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ

ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟು ಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿರುದು ಇನ್ನೂ ಅಚ್ಚಿ ಮೂಡಿಸಿದೆ. ಇನ್ನೂ ಈ ರೆಟ್ರೋ ಹಾಡಿಗೆ ಚರಣ್‌ರಾಜ್ ದನಿಗೂಡಿಸಿರುವುದು ವಿಶೇಷ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

ಕಿರಿಕ್ ಪಾರ್ಟಿ’ ಹಾಗೂ ‘ಅವನ್ನೇ ಶ್ರೀಮನ್ನಾರಾಯಣ’ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Comments (0)

Your email address will not be published. Required fields are marked *

Back to top button