ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ಬಂಧಿಸಲಾಗಿದೆ. ಸುದೀಪ್, ಉಪೇಂದ್ರ ಅವರು ದರ್ಶನ್ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ರಚಿತಾ ರಿಯಾಕ್ಟ್ ಮಾಡಿದ್ದಾರೆ. ಇದೀಗ ದರ್ಶನ್ ಪರ ರಚಿತಾ ರಾಮ್ ಮಾತನಾಡಿದ್ದಾರೆ.
ಈ ನೋಟ್‌ನ ನಾನು ನಟಿಯಾಗಿಲ್ಲ ಅಲ್ಲ. ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ ಎಂದು ಬರೆದುಕೊಂಡಿದ್ದಾರೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ ಎಂದು ರಚಿತಾ ರಾಮ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಅಂದಹಾಗೆ, ‘ಬುಲ್ ಬುಲ್’ ಸಿನಿಮಾದ ಮೂಲಕ ದರ್ಶನ್‌ಗೆ ರಚಿತಾ ರಾಮ್ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಬಳಿಕ ಅಂಬರೀಶ್, ಕ್ರಾಂತಿ ಸಿನಿಮಾದಲ್ಲೂ ದರ್ಶನ್‌ಗೆ ಜೋಡಿಯಾಗಿ ನಟಿಸಿದ್ದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


