Wednesday, January 28, 2026
17 C
Bengaluru
Google search engine
LIVE
ಮನೆ#Exclusive NewsTop Newsಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್

ಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್

ಹಾವೇರಿ: ಬಾಲಕನಿಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಹೊಲಿಕೆ ಅಂಟಿಸಿ ಅಮಾನವೀಯವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಇನ್ನೂ ಈ ಕುರಿತು ಬಾಲಕನ ಪೋಷಕರು ದೂರು ನೀಡಿದ್ರೂ ಕೂಡ ನರ್ಸ್ ಅನ್ನು ಅಮಾನತ್ತು ಮಾಡದೇ ಬೇರೆಡೆಗೆ ಟ್ರಾನ್ಸ್‌ಫರ್ ಮಾಡಿರುವುದು ಪೋಷಕರ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇದು ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನ ಕೆನ್ನೆಗೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್‌ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ವಿದ್ಯಾರ್ಥಿಗೆ ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟು ಫೆವಿಕ್ವಿಕ್ ಗಮ್ ಅಂಟಿಸಿ ನರ್ಸ್‌ ಜ್ಯೋತಿ ಎನ್ನುವವರು ಚಿಕಿತ್ಸೆ ನೀಡಿದ್ದಾರೆ.

ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನಿಗೆ ಕೆನ್ನೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್‌ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ವಿದ್ಯಾರ್ಥಿಗೆ ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟು ಫೆವಿಕ್ವಿಕ್ ಗಮ್ ಅಂಟಿಸಿ ನರ್ಸ್‌ ಜ್ಯೋತಿ ಎನ್ನುವವರು ಚಿಕಿತ್ಸೆ ನೀಡಿದ್ದಾರೆ. ಹೀಗಾಗಿ ನರ್ಸ್​ ಜ್ಯೋತಿಯನ್ನು ಅಮಾನತು ಮಾಡಬೇಕೆಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments