ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ ; ಅಲ್ಲು ಅರವಿಂದ್

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ ಮೀಟಿಂಗ್ನಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಚಿತ್ರರಂಗಕ್ಕೆ ಒಂದಷ್ಟು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಸಿನಿಮಾಗಳ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಿದಾಗ ಇಂಥ ದುರ್ಘಟನೆಗಳು ನಡೆಯುತ್ತವೆ. ಹಾಗಾಗಿ ಸದ್ಯಕ್ಕೆ ಎಲ್ಲ ರೀತಿಯ ಸ್ಪೆಷಲ್ ಶೋಗಳನ್ನು ನಿಷೇಧಿಸಲಾಗಿದೆ. ಅಲ್ಲದೇ, ಸೆಲೆಬ್ರಿಟಿಗಳು ತಮ್ಮ ಸ್ವಂತ ಬೌನ್ಸರ್ಗಳನ್ನು ನೇಮಿಸಿಕೊಂಡಾಗ ಬೌನ್ಸರ್ಗಳು ಜನರೊಂದಿಗೆ ಅಪಾಯಕಾರಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಕೂಡ ರೇವಂತ್ ರೆಡ್ಡಿ ಅವರು ಎಚ್ಚರಿಗೆ ನೀಡಿದ್ದಾರೆ.
ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 2 ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ. ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ. ‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸಲು ಕೂಡ ಅವರಿಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಲ್ಲು ಅರವಿಂದ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.




