ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಜೇವರ್ಗಿ ಬಿ ಗ್ರಾಮದ ಬಳಿ ಕಾಂಗ್ರೆಸ್ ಶಾಸಕರ ಕಾರು ಅಪಘಾತವಾಗಿದ್ದು, ಅಫಜಲಪುರ ಶಾಸಕ ಎಂ ವೈ ಪಾಟೀಲ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಫಜಲಪುರ ತಾಲೂಕಿನ ಜೇವರ್ಗಿ ಬಿ ಗ್ರಾಮದ ಹೊರವಲಯದಲ್ಲಿ ಕಾರು ಟರ್ನ್ ಮಾಡುವಾಗ ಅಪಘಾತ ಸಂಭವಿಸಿದೆ. ಜೇವರ್ಗಿ ಬಿ ಗ್ರಾಮದಲ್ಲಿ ಶಾಲಾ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಶಾಸಕ ಎಂವೈ ಪಾಟೀಲ್ ಮುಖಕ್ಕೆ ಹಾಗೂ ಕಾಲಿಗೆ ಗಾಯವಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕರಿದ್ದ ಗಾರಿನ ಗಾಜು ಪುಡಿ ಪುಡಿಯಾಗಿದೆ. ಅಫಜಲಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ರು ಸ್ಥಳಕ್ಕೆ ಆಗಮಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.


