ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ಕೆರೆಗೆ ಬಿದ್ದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಗ್‌ರಾಜ್‌ನ ಪ್ರಸಿದ್ಧ ಸಂಗಮ ಕ್ಷೇತ್ರದಿಂದ 2 ಕಿಲೋಮೀಟರ್ ದೂರದಲ್ಲಿರುವ ಕೆರೆಗೆ ಬಿದ್ದು, ಮೈಕ್ರೋಲೈಟ್ ವಿಮಾನವು ಪತನಗೊಂಡಿದೆ. ತರಬೇತಿ ವೇಳೆ ಘಟನೆ ನಡೆದಿದೆ.
ವಿಮಾನ ಪತನಗೊಂಡ ತಕ್ಷಣ ಸ್ಥಳೀಯರು ಮತ್ತು ರಕ್ಷಣಾ ಪಡೆಗಳು ಕಾರ್ಯಪ್ರವೃತ್ತರಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಪೈಲಟ್‌ಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ವಾಯುಪಡೆಯ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಸದ್ಯ ಕೆರೆಯಿಂದ ವಿಮಾನದ ಅವಶೇಷಗಳನ್ನು ಹೊರತೆಗೆಯಲಾಗಿದದೆ.


