ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ತುರ್ತು ಭೂಸ್ಪರ್ಶ ವೇಳೆ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. ಇಂದು ಅಜಿತ್ ಪವಾರ್ ಅಂತ್ಯ ಸಂಸ್ಕಾರ ರಾಜಕೀಯ ಭದ್ರಕೋಟೆ ಮತ್ತು ತವರು ಜಿಲ್ಲೆ ಬಾರಾಮತಿಯಲ್ಲಿ ನೆರವೇರಿದೆ. ಅಂತ್ಯಕ್ರಿಯೆಗೂ ಮುನ್ನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸರ್ಕಾರದ ಪೂರ್ಣ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆದಿದೆ..


