Wednesday, January 28, 2026
18.8 C
Bengaluru
Google search engine
LIVE
ಮನೆ#Exclusive NewsTop Newsಬೆಂಗಳೂರು: ಅರಮನೆ ಮೈದಾನದಲ್ಲಿ ಬ್ರಾಹ್ಮಣ ಸಮಾವೇಶ : ಸಂಚಾರ ನಿಯಂತ್ರಣಕ್ಕೆ ಪೊಲೀಸರಿಂದ ಬದಲಿ ಮಾರ್ಗ

ಬೆಂಗಳೂರು: ಅರಮನೆ ಮೈದಾನದಲ್ಲಿ ಬ್ರಾಹ್ಮಣ ಸಮಾವೇಶ : ಸಂಚಾರ ನಿಯಂತ್ರಣಕ್ಕೆ ಪೊಲೀಸರಿಂದ ಬದಲಿ ಮಾರ್ಗ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮತ್ತು ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಇತರೆ ಸಚಿವರುಗಳು, ಸಮಾಜದ ವಿವಿಧ ಮಠಾಧೀಶರು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಸೇರಲಿದ್ದಾರೆ.

ಈ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಲಿರುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಅರಮನೆ ಮೈದಾನ ರಸ್ತೆ ಮತ್ತು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಮಾಡಿ ಪರ್ಯಾಯ ಮಾರ್ಗಗಗಳನ್ನು ಜನತೆಗೆ ಸೂಚಿಸಿದ್ದಾರೆ.

ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್​ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್‌ರ್ಯಾಂವ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ಯೂತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ವಾಹನ ನಿಲುಗಡೆ ನಿಷೇಧ ಮಾಡಿರುವ ರಸ್ತೆಗಳು

ಪ್ಯಾಲೇಸ್‌ ರಸ್ತೆ, ಎಂ.ವಿ. ಜಯರಾಮರಸ್ತೆ, ಜಯಮಹಲ್ ರಸ್ತೆ, ಸಿ.ಎ. ರಾಮನ್ ರಸ್ತೆ, ವಸಂತನಗರರಸ್ತೆ, ರಮಣಮಹರ್ಷಿರಸ್ತೆ, ನಂದಿದುರ್ಗರಸ್ತೆ, ಬಳ್ಳಾರಿ ರಸ್ತೆ, ಮೌಂಟ್‌ ಕಾರ್ಮೆಲ್ ಮೇಖಿ ಸರ್ಕಲ್​ನಿಂದ ತರಳಬಾಳು ರಸ್ತೆ, ಕಾಲೇಜ್ ರಸ್ತೆ, ಯಶವಂತಪುರ ರಸ್ತೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments