ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್ (Telugu choreographer) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್ ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.