Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಮೈಸೂರು : ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ

ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

Comments (0)

Your email address will not be published. Required fields are marked *

Back to top button