ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತ ಎಂದು ಗುರುತಿಸಿಕೊಂಡಿದ್ದ ಲಿಂಗರಾಜ್. ಮಹಾರಾಷ್ಟ್ರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವ ವೇಳೆ ಮುಂಬೈನ ಬಜಾರ್ ಪೇಠ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ಧಾರೆ. ಬಂಧನದ ವೇಳೆ 120 ಕ್ಕೂ ಹೆಚ್ಚು ಕೊಡೆನೈನ್ ಸಿರಪ್ ಬಾಟಲ್ ಇತ್ತು ಎನ್ನಲಾಗಿದೆ. ಎನ್ಡಿಪಿಎಸ್ ಕಾಯ್ದೆ ಅಡಿ ಮುಂಬೈನ ಬಜಾರ್ ಪೇಠ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


