Wednesday, April 30, 2025
24 C
Bengaluru
LIVE
ಮನೆUncategorizedನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಗೆಲುವು

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಗೆಲುವು

ಮೈಸೂರು: ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್​ನ ಭೋಜೇಗೌಡ ಭಾರೀ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಮೊದಲ ಪ್ರಾಶಸ್ತ್ಯ ಮತದಲ್ಲೇ 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಒಟ್ಟು ಆಗಿದ್ದ ಮತ 19479 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 18658 ಮತಗಳು ಸಿಂಧುವಾದರೆ, 821 ಕುಲಗೆಟ್ಟ ಮತಗಳ ಪಟ್ಟಿ ಸೇರಿದ್ದವು. 9,330 ಖೋಟಾ ನಿಗಧಿಯಾಗಿತ್ತು.

ಭೋಜೇಗೌಡರು 9829 ಮತಗಳನ್ನ ಮೊದಲ ಪ್ರಾಶಸ್ತ್ಯದಲ್ಲೇ ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್​ಗೆ  4562 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.

ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿತ್ತು, ಅದರಂತೆಯೇ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ. ಹೊಂದಾಣಿಕೆಯಿಂದ ಕೆಲಸ ಮಾಡಿದ್ದೇವೆ. ಕಳೆದ ಬಾರಿಯೇ ನಾನು ಜೆಡಿಎಸ್ ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ಬಲ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಫಲಪ್ರದವಾಗಿದೆ. ಬಿಜೆಪಿ ಜೆಡಿಎಸ್ ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭೋಜೇಗೌಡ ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments