ಬೆಂಗಳೂರು : ಗುತ್ತಿಗೆದಾರನ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಆಗ್ರಹಿಸಿದ್ದಾರೆ. ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ. ಸಚಿನ್ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ ಕೊಡುವಂತೆ ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ಪ್ರಕಟಣೆ ಮೂಲಕ ದೂರಿದ್ದಾರೆ.
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ..? ; ಆರ್.ಅಶೋಕ್
RELATED ARTICLES