ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದ ನಿವಾಸಿ ಯಶೋಧಾ ಎಂಬುವವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಮನೆಗೆ ಬೆಂಕಿ ಬಿದ್ದ ಹಿನ್ನೆಲೆ ಮನೆಯಲ್ಲಿದ್ದವರು ತಕ್ಷಣ ಮನೆಯಿಂದ ಹೊರ ಓಡಿ ಬಂದು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಪ್ರಯೋಜನವಾಗಿಲ್ಲ. ಹೆಚ್ಚಿನ ಗಾಳಿ ಇದ್ದ ಕಾರಣ ಕ್ಷಣ ಮಾತ್ರದಲ್ಲಿ ಅಗ್ನಿ ಇಡೀ ಮನೆಯನ್ನ ಆವರಿಸಿಕೊಂಡಿದೆ.

ಯಶೋಧಾ ಎಂಬುವವರಿಗೆ ಸೇರಿದ ಮನೆಗೆ ಬೆಂಕಿ ಬಿದ್ದ ಕಾರಣ ಒಂದು ಲಕ್ಷ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ. ಮನೆಯಲ್ಲಿ 30 ಸಾವಿರ ನಗದು ಟಿವಿ ದವಸ ದಾನ್ಯ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸಿದೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.