ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಓರ್ವ ಆರೋಪಿಯ ಬಂಧನ ಆಗಿದೆ. ಸೈಯ್ಯದ್ ನಸ್ರು (30) ಎಂಬ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಯಾವ ಕಾರಣಕ್ಕಾಗಿ ಕೃತ್ಯ ಎಸಗಲಾಗಿದೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಕೃತ್ಯ ಎಸಗಿರೋದಾಗಿ ತಪ್ಪೊಪ್ಪಿಗೆ ನೀಡಿದ್ದಾನೆ ಎನ್ನಲಾಗಿದೆ. ಹಸುವಿನ ಕೆಚ್ಚಲು ಕೊಯ್ಯಲು ಕಾರಣ ಏನು? ಹಳೆಯ ದ್ವೇಷಕ್ಕೆ ಏನಾದರೂ ಈ ಕೃತ್ಯ ಎಸಗಲಾಗಿದ್ಯಾ? ಈ ಕೃತ್ಯ ನಡೆಸಲು ಬೇರೆ ಏನಾದರೂ ಕಾರಣ ಇದೆಯಾ ಅನ್ನೋದ್ರ ಬಗ್ಗೆ ವಿಚಾರಣೆ ನಡೆಸ್ತಿದ್ದಾರೆ.