#Exclusive NewsTop Newsಕ್ರೈಂ ಸ್ಟೋರಿಜಿಲ್ಲೆರಾಜ್ಯಸುದ್ದಿ

ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸಾವು….!

ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

30 ವರ್ಷದ ಜ್ಞಾನೇಶ್ ಮೃತ ಎಂಜಿನಿಯರ್. ಈತ ಕಳೆದ ಹಲವು ವರ್ಷಗಳಿಂದ ಕೆಸ್ತೂರು ಗ್ರಾಮದಲ್ಲಿ ವಾಸವಾಗಿದ್ದ.ಮೃತ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯಯಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ʼWork Pressureʼ ಎಂದು ಹಾಕಿಕೊಂಡಿದ್ದ.ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Comments (0)

Your email address will not be published. Required fields are marked *

Back to top button