ಹಿಂದೂ ಸಮುದಾಯ ಜಾತಿ, ಭಾಷೆ, ಪ್ರಾದೇಶಿಕತೆ ಆಧಾರದಲ್ಲಿ ಒಡೆಯುತ್ತಾ ಬರಲಾಗಿದೆ. ಮೂರ್ಖರಾಮಯ್ಯನಂಥವರು ಸಮಾಜವನ್ನ ಒಡೆಯುತ್ತಲೇ ಬಂದಿದ್ದಾರೆ . ಈ ಬಾರಿ ಅವರಿಗೆ ಯಾವ ರೀತಿಯ ಹೊಡೆತ ನೀಡಬೇಕೆಂದರೆ ಪುನರ್‌ಜನ್ಮವೂ ಸಿಗಬಾರದು ಎಂದು ಹೇಳಿ ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲೇ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದರು.
ಮುಖ್ಯಮಂತ್ರ ಸಿದ್ದರಾಮಯ್ಯ ವಿರುದ್ಧ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ಸಂಸದನ ವಿರುದ್ಧ ಕಿಡಿಕಾರಿದ್ದಾರೆ ,
ಅನಂತಕುಮಾರ್ ಅವರು ಸಿದ್ದರಾಮಯ್ಯ ಅವರ ಕಾಳಿನ ಧೂಳಿಗೂ ಸಮನಲ್ಲ, ಅವರು ಹದ್ದು ಮೀರಿ ಮಾತನಾಡುತ್ತಿದ್ದಾರೆ. ಈ ರೀತಿಯ ಹೇಳಿಕೆಗೆ ಜನರೇ ಉತ್ತರ ಕೊಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.
ಇಷ್ಟು ದಿನ ನಾಪತ್ತೆ ಆಗಿದ್ದವರು ಈಗ ದಿಢೀರ್ ಪ್ರತ್ಯಕ್ಷವಾಗಿದ್ದಾರೆ. ಮೋದಿ ಬಗ್ಗೆ ಈ ರೀತಿ ಮಾತಾಡಿದರೆ ಅವರು ಸುಮ್ಮನಿರುತ್ತಾರೆಯೇ? ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಕೂಡ ಸಂಸದನ ವಿರುದ್ಧ ಕಿಡಿಕಾರಿದ್ರು.
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಶಾಸಕ ಪ್ರದೀಪ್ ಈಶ್ವರ್ ಕೂಡ ಗುಡುಗಿದ್ದಾರೆ.
ಇದೇ ವೇಳೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಪಕ್ಷದ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಅನಂತ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ಸಿಗರು, ಅವರನ್ನು ಗಡೀಪಾರು ಮಾಡುವಂತೆ ಆಗ್ರಹಿಸಿದ್ದಾರೆ. ಈ ನಡುವೆ ಅನಂತಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸರಿಂದ ಸುಮೋಟೋ ಪ್ರಕರಣವು ದಾಖಲಾಗಿದೆ.