ಜಿಲ್ಲೆರಾಜಕೀಯರಾಜ್ಯ

ಅನಂತಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಹಾಕಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನವಾಗಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು. ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷ್‌ನಲ್ ಜಿಲ್ಲಾ ಘಟಕ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಿದ್ದರಾಮಯ್ಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿರುವ ಹೆಗೆಡೆ ಅವರನ್ನು ಬಂಧನ ಮಾಡುವಂತೆ ಆಗ್ರಹಿಸಿದರು. ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಹೆಗೆಡೆ ವಿರುದ್ಧ ದಿಕ್ಕಾರ ಕೂಗಿದರು. ಮುಖ್ಯಮಂತ್ರಿ ವಿರುದ್ಧ ಮಾತನಾಡುವ ಮೂಲಕ ಸಂಸದರು ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸಿದ್ದಾರೆ. ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಅನಂತಕುಮಾರ್ ಹೆಗಡೆ ಮತ್ತೊಂದು ಭಾರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

Comments (0)

Your email address will not be published. Required fields are marked *

Back to top button