ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಾನುವಾರ ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಹುಡುಗರ ಜತೆ ಗಲಾಟೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಗೆ ಸಂಬಂಧಿಸಿದಂತೆ ಧ್ರುವ ಸರ್ಜಾ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಹಲ್ಲೆ ಬಗ್ಗೆ ಬನಶಂಕರಿ ಪೊಲೀಸರಿಗೆ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವೊಂದಕ್ಕೆ ಧ್ರುವ ಸರ್ಜಾ ಮಾಹಿತಿ ನೀಡಿ ʻʻಪ್ರಶಾಂತ್ ಅವರು ಕೆಡಿ ಸಿನಿಮಾ ಈವೆಂಟ್‌ನಲ್ಲಿ ನನ್ನ ಜತೆಯೇ ಇದ್ದರು. ಹೌದು, ಹಲ್ಲೆ ನಡೆದಿದ್ದು ನಿಜ. ಅವರ ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಪ್ರಶಾಂತ್ ನಮ್ ಹುಡುಗ, ಅವನ ಜತೆಗಿರುತ್ತೇನೆ. ಇದು ಮೇಲ್ನೋಟಕ್ಕೆ ಪ್ರಿ ಪ್ಲಾನ್ ಅನ್ನಿಸುತ್ತದೆ. ಈ ವಿಚಾರ ದೊಡ್ಡದು ಮಾಡೋದು ಬೇಡʼʼ ಎಂದಿದ್ದಾರೆ.. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಶಾಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಂಬರ್ ಪ್ಲೇಟ್ ಇಲ್ಲದ ಗಾಡಿಯಲ್ಲಿ ಮುಖ ಮುಚ್ಚಿಕೊಂಡು ಪ್ರಶಾಂತ್ ಮೇಲೆ ಇಬ್ಬರು ಅಪರಿಚಿತರು ಬೈಕ್ ಮೇಲೆ ಬಂದು ದಾಳಿ ನಡೆಸಿದ್ದಾರೆ. ಈಗಾಗಲೇ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ ಪ್ರಶಾಂತ್. ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com