ಮಂಗಳೂರು: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೆಪ್ಟೆಂಬರ್ 11 ರಂದು ಭೇಟಿ ನೀಡಲಿದ್ದಾರೆ. ಧರ್ಮಸ್ಥಳ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೆ ಅಂತರಾಷ್ಟೀಯಾಮಟ್ಟದಲ್ಲಿ ಸದ್ದು ಮಾಡುತ್ತು.. ಇದೀಗ ನಟ ಹಾಗೂ ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಎಂಟ್ರಿಯಾಗಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ನಿಂತಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಬರುತ್ತಿದೆ. ಇದೀಗ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಿಂತಿದ್ದು, ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಆಗಮಿಸಲಿದ್ದಾರೆ.
ಸೆ.11 ಪವನ್ ಕಲ್ಯಾಣ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಸೇವೆ ನೆರವೇರಲಿದ್ದು, ಈ ಮೂಲಕ ಕ್ಷೇತ್ರದ ಅಪಪ್ರಚಾರ ವಿರುದ್ಧ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಇದೇ ವೇಳೆ ದೇವಸ್ಥಾನದ ಮುಂಭಾಗದಲ್ಲಿ ವಿಶೇಷ ಆರತಿ ಸೇವೆ ನಡೆಯಲಿದೆ.