Thursday, November 20, 2025
19.9 C
Bengaluru
Google search engine
LIVE
ಮನೆದೇಶ/ವಿದೇಶರಾಜ್ಯದ ಕೈತಪ್ಪಿದ ಗೂಗಲ್​​​​​​ AI ಹಬ್​​ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ

ರಾಜ್ಯದ ಕೈತಪ್ಪಿದ ಗೂಗಲ್​​​​​​ AI ಹಬ್​​ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ

ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್​​ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್​​​​ ಡಾಲರ್​​​​​​​​ ಹೂಡಿಕೆ ಮಾಡುವುದಾಗಿ ಗೂಗಲ್​ ಕಂಪನಿ ಘೋಷಿಸಿದೆ.. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್​​​ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.. ​​

ರಾಜ್ಯದ ಕೈತಪ್ಪಿದ ಗೂಗಲ್ ಎ.ಐ ಹಬ್ ಆಂಧ್ರ ಪಾಲಾಗಿದೆ’ ಎಂದು ಆರೋಪಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿಗೆ ಗ್ರಹಣ ಹಿಡಿದಿದೆ. ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷತನದಿಂದ ₹1.3 ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು, ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಹೇಳಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿಗೆ ಗ್ರಹಣ ಹಿಡಿಸಿ ಬಿಟ್ಟಿದೆ. ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷ್ಯತನದಿಂದ 1.3ಲಕ್ಷ ಕೋಟಿ ರೂ. ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು ಕರ್ನಾಟಕಕ್ಕೆ ದೊಡ್ಡ ಹೊಡೆತ ಎಂದು ಜೆಡಿಎಸ್ ಹೇಳಿದೆ. ಇನ್ನು ಜಾಗತಿಕ ಟೆಕ್ ದಿಗ್ಗಜ ಗೂಗಲ್ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸುಮಾರು 1.3 ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ ಎಐಹಬ್​​ ಸ್ಥಾಪಿಸಲು ಆಂಧ್ರ ಪ್ರದೇಶ ಸರಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

30,000 ಉದ್ಯೋಗ ಜೊತೆಗೆ ವಾರ್ಷಿಕ 10,000 ಕೋಟಿ ರೂ. ಆದಾಯಗಳಿಸ ಬಹುದಾಗಿದ್ದ ಯೋಜನೆಯ ಕರ್ನಾಟಕದ ಕೈತಪ್ಪಿ ಅನ್ಯ ರಾಜ್ಯಕ್ಕೆ ಹೋಗಿದೆ.ಜಾಗತಿಕ ಬೃಹತ್ ಹೂಡಿಕೆಯ ಯೋಜನೆ ನೆರೆ ರಾಜ್ಯ‌ ಆಂಧ್ರ ಪಾಲಾಗಿದೆ. ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸುವುದನ್ನು ಬಿಟ್ಟು ಉದ್ಯಮಿಗಳು ಬೆಂಗಳೂರು ಬಿಟ್ಟು ಹೋದರೆ ಹೋಗಲಿ ಎಂದು ಧಮ್ಕಿ ಹಾಕುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್, ನಿಷ್ಪ್ರಯೋಜಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಗೂಗಲ್ AI ಹಬ್ ಕರ್ನಾಟಕದ ಕೈತಪ್ಪಲು‌ ನೀವು ಮತ್ತು ನಿಮ್ಮ ಸರ್ಕಾರದ ನಿರ್ಲಕ್ಷತನವೇ ಕಾರಣ ಎಂದು ಜೆಡಿಎಸ್ ಕಿಡಿಕಾರಿದೆ.

ಕಿರಣ್ ಮಜುಂದಾರ್ ಸತ್ಯ ಹೇಳಿದರೆ ಇಡೀ ಸರ್ಕಾರವೇ ಅವರ ಮೇಲೆ ಮುಗಿ ಬೀಳುತ್ತದೆ. ಈ ಸರ್ಕಾರ ದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಬಳಕೆದಾರರೊಬ್ಬರು ಜೆಡಿಎಸ್ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರನ್ನು ಅವೈಜ್ಞಾನಿಕವಾಗಿ ವಿಸ್ತರಿಸಿದ ಪರಿಣಾಮ ನಗರವೀಗ ತಿಪ್ಪೆಗುಂಡಿಯಂತಾಗಿದೆ ಎಂದು ಮತ್ತೊಬ್ಬ ಬಳಕೆದಾರು ಪ್ರತಿಕ್ರಿಯಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments