Thursday, November 20, 2025
19.5 C
Bengaluru
Google search engine
LIVE
ಮನೆ#Exclusive Newsಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ವಿಜಯನಗರ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ  ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ, ವಿಜಯನಗರ  ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಸೇರಿಯನ್ ಮೂಲಕ ಹೆರಿಗೆಯಾಗಿ ಐದು ದಿನಗಳ ಬಳಿಕ ಬಾಣಂತಿ ಸಾವಾಗಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಮೃತಳ ಪೋಷಕರು ಆಸ್ಪತ್ರೆ ಮುಂದೆ ಕಣ್ಣೀರು ಹಾಕಿದ್ದಾರೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಳಪೆ IV ದ್ರಾವಣದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಐವರ ಬಾಣಂತಿಯರ ಸರಣಿ ಸಾವಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ವಿಜಯನಗರ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಸಾವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾಗಲಾಪೂರ ಗ್ರಾಮದ ಐಶ್ವರ್ಯ (20) ಮೃತ ದುರ್ದೈವಿ.

ಗರ್ಭಿಣಿ ಐಶ್ವರ್ಯ ಡಿಸೆಂಬರ್ 19 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸೆಂಬರ್ 20 ರಂದು ಐಶ್ವರ್ಯಯವರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಮುದ್ದಾದ ಹೆಣ್ಣು ಮಗು ಜನನವಾಗಿದೆ. ಮನೆಗೆ ಮಹಾಲಕ್ಷ್ಮಿ ಬಂದ್ಲು ಅಂತ ಇಡೀ ಕುಟುಂಬ ಸಂತಸದಲ್ಲಿ ಇತ್ತು. ಆರಂಭದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿಯೇ ಇತ್ತು. ಹೆರಿಗೆಯಾಗಿ ಮೂರು ದಿನಗಳ ಬಳಿಕ, ಡಿಸೆಂಬರ್ 23 ರಂದು ಅದೇನಾಯಿತೋ ಏನೋ ಗೊತ್ತಿಲ್ಲ ಬೆಳಗ್ಗೆ ತಿಂಡಿ ಮಾಡಿದ ಬಳಿಕ ಬಾಣಂತಿ ಐಶ್ವರ್ಯಳಿಗೆ ಇದ್ದಕ್ಕಿದ್ದಂತೆ ವಾಂತಿ ಭೇದಿ ಶುರುವಾಗಿದೆ.

ತಕ್ಷಣ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಬಳಿಕ, ಕುಟುಂಬಸ್ಥರು ಕೊಪ್ಪಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ದಾಖಲಿಸುತ್ತಿದ್ದಂತೆ ಐಶ್ವರ್ಯ ಮೃತಪಟ್ಟಿದ್ದಾಳೆ. ಐಶ್ವರ್ಯ ಸಾವಿಗೆ ವೈದ್ಯರು ಕಾರಣ. ವೈದ್ಯರ ನಿರ್ಲಕ್ಷ್ಯಕ್ಕೆ ಐಶ್ವರ್ಯ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಶಂಕರ್ ನಾಯ್ಕ ಮಾತನಾಡಿ, ಐಶ್ವರ್ಯ ಅವರು ಆಸ್ಪತ್ರೆಗೆ ದಾಖಲು ಆಗುವಾಗಲೇ HB (ಹಿಮೋಗ್ಲೋಬಿನ್) 11.9 ಇತ್ತು. ಬಳಿಕ ಡಿಸೆಂಬರ್​ 20 ರಂದು ಸಿಸೇರಿಯನ್ ಮೂಲಕ ಹೆರಿಗೆಯಾಗಿದೆ. ವಿಜಯನಗರ ಆಸ್ಪತ್ರೆಯಲ್ಲಿ ಐಶ್ವರ್ಯ ಅವರಿಗೆ ಏನು ತೊಂದರೆಯಾಗಿರಲಿಲ್ಲ. ವಾಂತಿ-ಭೇದಿ ಆಗಿದ್ದಕ್ಕೆ ನಾವು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ವಿ. ಕೊಪ್ಪಳ ಆಸ್ಪತ್ರೆಯ ವೈದ್ಯರು ನೀಡಿದ ವರದಿ ಪ್ರಕಾರ, ಟೆಕ್ಕಿ ಕಾರ್ಡಿಯ ಸೇರಿದೆ. ವಾಂತಿ-ಭೇದಿಯಿಂದ ಮೆಟಾಬೋಲಿಕ್ ಆ್ಯಸಿಡೋಟಸ್ ಆಗಿ ಕಿಡ್ನಿ ವೈಫಲ್ಯದಿಂದ ಸಾವಾಗಿದೆ ಅಂತ ಉಲ್ಲೇಖವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments