Thursday, January 29, 2026
16.9 C
Bengaluru
Google search engine
LIVE
ಮನೆ#Exclusive NewsTop Newsಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್‌(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ.

2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.

ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ  2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.9ರಂದು 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು. 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ECIR ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು.

ಜಮೀನಿಗೆ ಭೇಟಿ ಕೊಟ್ಟ ಲೋಕಾಯುಕ್ತ ಟೀಂ

ಇನ್ನು ಲೋಕಾಯುಕ್ತ ಮುಡಾ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ‌ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ. ಲೋಕಾಯುಕ್ತ ಎಸ್​ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಸ್ಥಳದಿಂದಲೇ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments