ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಮಿಂಚುಹುಳು ಹೆಸರಿನ ಸಿನಿಮಾದಲ್ಲಿ ಅವರು ನಾಯಕನಾಗಿ ನಟಿಸಿದ್ದಾರೆ. ಮಹೇಶ್ ಕುಮಾರ್ ಅವರ ಕಥೆ, ಚಿತ್ರಕಥೆ, ನಿರ್ದೇಶನವಿರುವ ಈ ಚಿತ್ರಕ್ಕೆ ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಅವರು ಬಂಡವಾಳ ಹಾಕಿದ್ದು , ವಿಜಯ್ ಕುಮಾರ್ ಮತ್ತು ಅಬ್ದುಲ್ ರಫೀಕ್ ಉಲ್ಲಾ ಸಾಥ್ ನೀಡಿದ್ದಾರೆ. ಅಣ್ಣಾವ್ರ ಆತ್ಮೀಯರಾದ ದೊಡ್ಡಹುಲ್ಲೂರು ರುಕ್ಕೋಜಿರಾವ್ ಅವರು ತಮ್ಮ ಊರಿನವರೇ ಆದ ನಿರ್ಮಾಪಕರ ಜೊತೆ ಹೆಗಲಾಗಿ ನಿಂತು ಈ ಚಿತ್ರ ನಿರ್ಮಾಣದಲ್ಲಿ ಸಂಪೂರ್ಣ ಸಹಕಾರ ನೀಡಿದ್ದಾರೆ.

ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆದ ಚಿತ್ರದ ವಿಶೇಷ ಪ್ರದರ್ಶನದಲ್ಲಿ ನಾದಬ್ರಹ್ಮ ಹಂಸಲೇಖಾ, ಹಿರಿಯನಟಿ ಜಯಮಾಲಾ, ನಿರ್ದೇಶಕ ಪಿ.ಶೇಷಾದ್ರಿ, ಲಹರಿ ವೇಲು, ಶಾಸಕ ಶರತ್ ಬಚ್ಚೇಗೌಡ, ಚಿಂತಕ ಪ್ರೊ. ರಾಜಪ್ಪ ದಳವಾಯಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡು ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ್ರು, ದೊಡ್ಡಹುಲ್ಲೂರು ರುಕ್ಕೋಜಿರಾವ್,‌ ರಾಜ್ ಪುತ್ರಿಯರಾದ ಶ್ರೀಮತಿ ಲಕ್ಷ್ಮಿ, ಪೂರ್ಣಿಮಾ ರಾಮ್ ಕುಮಾರ್ ಸೇರಿದಂತೆ ಅವರ ಕುಟುಂಬದ ಬಹುತೇಕ ಸದಸ್ಯರು ಚಿತ್ರವನ್ನು ವೀಕ್ಷಿಸಿದರು. ನಗರ ಪ್ರದೇಶದಲ್ಲಿ ನಡೆಯುವ ಕಥೆ ಇದಾಗಿದ್ದು, ಬೇವಬ್ದಾರಿ ತಂದೆ ಹಾಗೂ ಮಗನ ನಡುವಿನ ಕಥೆ ಇದಾಗಿದ್ದು, ಆ ತಂದೆಯ ಬದುಕಿನ ಬದುಕಿನ ವೈರುದ್ಯ, ಅಪ್ಪ- ಮಕ್ಕಳು ಬಾಡಿಗೆ ಕಟ್ಟಲಾಗದೆ ಪಾಳು ಮನೆ ಸೇರಿದಾಗ, ಆ ಮನೆಯಲ್ಲಿ ವಿದ್ಯುತ್ ಇರುವುದಿಲ್ಲ. ಏನಾದರೂ ಮಾಡಿ ವಿದ್ಯುತ್ ಹಾಕಿಸಬೇಕೆಂದು, ಪೇಪರ್ ಏಜೆಂಟ್ ಸಹಾಯದಿಂದ ಕರೆಂಟ್ ಹಾಕಿಸಲು ಮುಂದಾಗುತ್ತಾನೆ. ಆದರೆ ಒಮ್ಮೆ ಆತ ಕೂಡಿಟ್ಟ ಹಣವನ್ನು ಇಲಿಯೊಂದು ಕಚ್ಚಿ ಹಾಕುತ್ತದೆ. ಮಿಂಚು ಹುಳುವೊಂದನ್ನು ನೋಡಿದ ಆ ಹುಡುಗನಿಗೆ ಹೊಸ ಆಲೋಚನೆ ಬಂದು, ವಿದ್ಯಾರ್ಥಿಯ ಬದುಕಿನಲ್ಲಿ ಹೊಸದಾರಿಗೆ ಅವಕಾಶ ಮಾಡಿಕೊಡುತ್ತದೆ, ಅದು ಏನು ಎಂಬುದೇ ಮಿಂಚುಹುಳು ಚಿತ್ರದ ಕಥಾಹಂದರ.

ಮುಖ್ಯವಾಗಿ ಈ ಚಿತ್ರ ಆಗಲು ಪುನೀತ್ ರಾಜ್ ಕುಮಾರ್ ಅವರೇ ಕಾರಣ. ಕನ್ನಡಕ್ಕೆ ಕಂಟೆಂಟ್ ಓರಿಯೆಂಟ್ ಚಿತ್ರಗಳ ಅಗತ್ಯತೆ ತುಂಬಾ ಇದೆ. ಅಂಥಾ ಮತ್ತೊಂದು ಚಿತ್ರವಿದು‌. ಒಳ್ಳೇ ಸಿನಿಮಾನ ಬೆಂಬಲಿಸಿ ಎಂದರು ನಿರ್ದೇಶಕರು ಬಾಲನಟ ಪ್ರೀತಂ ಕೊಪ್ಪದ ಮಾತನಾಡಿ ನಮ್ಮ ಚಿತ್ರ ನಾಲ್ಕನೇ ತಾರೀಕು ಚಿತ್ರ ಬಿಡುಗಡೆಯಾಗುತ್ರಿದೆ ಎಲ್ಲರೂ ಚಿತ್ರ ನೋಡಿ ಸಹಕರಿಸಿ ಎಂದರು. ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಮಾತನಾಡಿ, ಚಿತ್ರದಲ್ಲಿ ನನ್ನದು ಮುಖ್ಯ ಪಾತ್ರಕ್ಕೆ ಪೂರಕವಾಗಿ‌ ನಿಲ್ಲುವ ಪಾತ್ರ. ನಮ್ಮ ಚಿತ್ರಕ್ಕೆ ಎಲ್ಲರ ಸಹಕಾರ, ಬೆಂಬಲ ಬೇಕು ಎಂದು ಕೇಳಿಕೊಂಡರು. ನಿರ್ಮಾಪಕ ರಾಜ್ ಗೋಪಾಲ್ ಮಾತನಾಡಿ, ನಾನು ಸಿನಿಮಾ ಮಾಡಬೇಕೆಂದುಕೊಂಡಿರಲಿಲ್ಲ. ಬಾಲ್ಯದ ಗೆಳೆಯ ರುಕ್ಕೋಜಿ ಅವರು ಈ ಥರದ ಒಂದು ಕಥೆ ಇದೆ, ಸಿನಿಮಾ ಮಾಡೋಣ ಅಂದರು. ಎಲ್ಲರೂ ಸೇರಿ ಈ ಚಿತ್ರ ಮಾಡಿದ್ದೇವೆ‌. ನೋಡಿ ಆಶೀರ್ವಾದ ಮಾಡಿ ಎಂದು ಕೇಳಿಕೊಂಡರು.

 

Leave a Reply

Your email address will not be published. Required fields are marked *

Verified by MonsterInsights