ದೆಹಲಿ: ರಾಜ್ಯದ ರಾಜಧಾನಿಗೆ, ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈಗ ಮತ್ತೊಂದು ವಿಮಾನಯಾನ ಶೀಘ್ರದಲ್ಲಿಯೇ(ಮಾರ್ಚ್ 30ರಿಂದ) ಆರಂಭವಾಗಲಿದೆ. ಇದರೊಂದಿಗೆ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ ಸಂಚಾರ ಮಾಡಲಿವೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದ್ದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಬೆಂಗಳೂರು – ಹುಬ್ಬಳ್ಳಿ 6E7056 ಬೆಳಿಗ್ಗೆ 9:55 – ಬೆಳಿಗ್ಗೆ 11:20
ಹುಬ್ಬಳ್ಳಿ- ಬೆಂಗಳೂರು 6E7263 ಬೆಳಿಗ್ಗೆ 11:55 – ಮಧ್ಯಾಹ್ನ 1:20
ಹುಬ್ಬಳ್ಳಿ-ಬೆಂಗಳೂರು ನಡುವೆ ಮತ್ತೊಂದು ವಿಮಾನ ಸೇವೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ಸಚಿವ ಜೋಶಿಯವರು ಇಂಡಿಗೋ ಆಡಳಿತ ವರ್ಗಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ. ಈ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.