ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ.
ಈ ಕುರಿತು ಮಾತನಾಡಿದ ಒಕ್ಕೂಟದ ಅಧ್ಯಕ್ಷ, ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸಲು ಮಾರ್ಚ್ 22ರ ವರೆಗೆ ಗಡುವು ನೀಡಿದೆ. ಅಷ್ಟರಲ್ಲಿ ಈಡೇರಿಸದೆ ಇದ್ದಲ್ಲಿ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಗಳು ಮತ್ತು ಗೂಡ್ಸ್ ವಾಹನಗಳು ಸೇರಿದಂತೆ 65 ಸಂಘಟನೆಗಳು ಬಂದ್ ನಲ್ಲಿ ಪಾಲ್ಗೊಳ್ಳಲಿವೆ ಎಂದು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಎಚ್ಚರಿಕೆ ನೀಡಿದ್ದಾರೆ.


