Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ

ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೊಂದು ಪತ್ರವನ್ನು ಪ್ರಿಯಾಂಕ್ ಅವರು ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ. ಈ ಪತ್ರದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಹೀಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.

ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಅವರ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರವನ್ನು ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments