ಜಿಲ್ಲೆರಾಜಕೀಯರಾಜ್ಯಸುದ್ದಿ

ಪಿಎಸ್ಐ ಪರುಶುರಾಮ್ ಸಾವಿನ ಬೆನ್ನಲ್ಲೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಸುಸೈಡ್

ಬೆಂಗಳೂರು ; ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು ಸಿಸಿಬಿಯ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ, ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೊ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ತಿಮ್ಮೆಗೌಡ ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಮತ್ತೆ ಸಿಸಿಬಿಗೆ ವರ್ಗಾವಣೆಯಾಗಿದ್ದರು. ಇನ್ನು ಇನ್ಸ್‌ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

 

 

Comments (0)

Your email address will not be published. Required fields are marked *

Back to top button